ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇಂದು ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಅಭ್ಯರ್ಥಿ ಪಟ್ಟಿ ಆಯ್ಕೆ ಪ್ರಕ್ರಿಯೆ ಭಾನುವಾರವೇ ನಡೆದರೂ ಅದೇ ದಿನ ಪಟಿ ಬಿಡು ಗಡೆಗೊಳ್ಳುವ ಬಗ್ಗೆ ಅನುಮಾನವಿದೆ. ಜೆಡಿ ಎಸ್ ಜತೆಗಿನ ಸ್ಥಾನ ಹೊಂದಾಣಿಕೆ ಬಗ್ಗೆ ಅಧಿಕೃತವಾಗಿ ಉಭಯ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆಸಲು ಭಾನುವಾರದ ಸಭೆ ಬಳಿಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.