ಕಾಪು : ನಿನ್ನೆ ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ನಡೆದ “ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆ” ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿನ ಮೈಸೂರು ಮತ್ತು ಕಲಬುರಗಿ ವಿಶ್ವವಿದ್ಯಾಲಯ ಇವುಗಳ ಬಾಕಿಯಿರುವ ವಾರ್ಷಿಕ ಮತ್ತು ಲೆಕ್ಕ ಸಂಶೋದನಾ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಮುಖ್ಯಸ್ಥರು ಹಾಗೂ ಅಧಿಕಾರಿಗಳಿಂದ ಮಾಹಿತಿಪಡೆಯಲಾಯಿತು