ಕೋಟ : ಕೋಟದ ಮಾಂಗಲ್ಯ ಮಂದಿರದಲ್ಲಿ ಕೋಟ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಗಾರ ನಡೆಯಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸದಸ್ಯತ್ವ ಅಭಿಯಾನದ ಕುರಿತು ಕಾರ್ಯಗಾರದ ಮಾಹಿತಿ ನೀಡಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ 6 ಲಕ್ಷ ಸದಸ್ಯತ್ವ ಮಾಡುವುದರ ಜೊತೆಗೆ ಪ್ರತಿ ಬೂತ್ ಮಟ್ಟದಲ್ಲಿ ಸುಮಾರು 300 ಸದಸ್ಯತ್ವ ಮಾಡುವಂತ ಗುರಿ ಹೊಂದಬೇಕು ಎಂದು ಬಿಜೆಪಿ ಸದಸ್ಯತ್ವ ಕಾರ್ಯಗಾರದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಈ ಕಾರ್ಯಾಗಾರದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಿ ಸದಸ್ಯತ್ವ ಅಭಿಯಾನದ ಬಗ್ಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಪ್ರಾಸ್ತಾವಿಕ ಮಾತನಾಡಿದರು.ಅಭಿಯಾನದ ಸಂಚಾಲಕ ಕಾಡೂರು ಸುರೇಶ್ ಶೆಟ್ಟಿ ಮಾತನಾಡಿ ಪ್ರತಿಯೊಬ್ಬ ಬೂತ್ ಅಧ್ಯಕ್ಷರು ತಮ್ಮ ಬೂತ್ ನಲ್ಲಿ ಶೀಘ್ರಗತಿಯಲ್ಲಿ ನೋಂದಾವಣಿ ಪ್ರಕ್ರಿಯೆ ಪ್ರಾರಂಭಿಸುವಂತೆ ಕೋರಿದರು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್, ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಸದಾನಂದ ಬಳ್ಕೂರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಅಧ್ಯಕ್ಷೆ ಸುಕನ್ಯಾ ಹೆಗ್ಡೆ,ಪಕ್ಷದ ಮುಖಂಡ ಶಾಂತರಾಮ್ ಶೆಟ್ಟಿ ಹಾಗೂ ಕೋಟ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿಯ ಪದಾಧಿಕಾರಿಗಳು, ಗ್ರಾಮ ಪಂಚಾಯತಿನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಸ್ವಾಗತಿಸಿ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ ವಂದಿಸಿದರು.