ಕೋಟ : ಗುರುವಾರ ಕೊಲ್ಲೂರು ಶ್ರೀ ಮುಕಾಂಬಿಕೆ ಸನ್ನಿಧಾನಕ್ಕೆ ಭೇಟಿ ನೀಡಿದ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದ. ಕ. ಹಾಲು ಒಕ್ಕೂಟದ ನಿರ್ದೇಶಕರಾದ ಪ್ರಕಾಶ್ಚಂದ್ರ ಶೆಟ್ಟಿ ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕಬೈಲ್ ಅವರ ಜೊತೆಯಾಗಿ ಬ್ರಹ್ಮಾವರ ಹಾಲು ಉತ್ಪಾದಕರ ನೌಕರರ ಸಂಘದ ಪರವಾಗಿ ನೌಕರರ ಸಮಸ್ಯೆಗಳ ಬಗ್ಗೆ ಮನವಿ ನೀಡಲಾಯಿತು. ಹಾಲು ಉತ್ಪಾದಕರ ತಾಲೂಕು ನೌಕರರ ಸಂಘದ ಅಧ್ಯಕ್ಷ ರಾಕೇಶ್ ನಾಯಕ್ ಹಾಗೂ ಸುರೇಶ್ ಮರಕಾಲ ಇದ್ದರು.