ಕುಂದಾಪುರ : ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹದ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲಕ್ಷ್ಮಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ರವರು ಉಡುಪಿ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಿದ್ದಾರೆ ಸಾರ್ವಜನಿಕರು ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ