ಉಡುಪಿ : ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ, ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಪುತ್ತಿಗೆ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರತೀರ್ಥರು ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಸ್ಪೀಕರ್ ಯು.ಟಿ. ಖಾದರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಡಿ, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಪಾನ್ ರಿಶ್ ಕೋಸಿ ಕ್ಯಾಯ ಅಧ್ಯಕ್ಷೆ ಕೋಶೋ ನಿವಾನೋ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಭೋಜೇಗೌಡ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭಾಗವಹಿಸಿದ್ದರು