ಕುಂದಾಪುರ :ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತದ ಘಟನಾ ಸ್ಥಳಕ್ಕೆ ಸಚಿವ ಮಾಂಕಾಳ್ ವೈದೈ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಬಗ್ಗೆ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು
ಘಟನೆಯಲ್ಲಿ ಬೋಟ್, ದೋಣಿ ಕಳೆದುಕೊಂಡ ಮೀನುಗಾರರಿಗೆ ತುರ್ತಾಗಿ ಜೀವನ ಕಟ್ಟಿಕೊಳ್ಳಲು ಮತ್ತು ಹೊಸ ಬೋಟ್ ನಿರ್ಮಿಸಲು ಪರಿಹಾರ, ಅನುದಾನ ನೀಡಬೇಕೆಂದು ಆಗ್ರಹ ಮಾಡುತ್ತೇನೆ ಎಂದು ಕೋಟಾ ಶ್ರೀನಿವಾಸ ಊಜಾರಿ ಹೇಳಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು, ಮೀನುಗಾರ ಮುಖಂಡ ರಮೇಶ ಕುಂದರ್, ಸ್ಥಳೀಯ ಮೀನುಗಾರ ಮುಖಂಡರು,ಉಪಸ್ಥಿತರಿದ್ದರು.