Home » ಮೂಡ್ಲಕಟ್ಟೆ : ಒರಿಎಂಟೇಷನ್ ಕಾರ್ಯಕ್ರಮ
 

ಮೂಡ್ಲಕಟ್ಟೆ : ಒರಿಎಂಟೇಷನ್ ಕಾರ್ಯಕ್ರಮ

ಐ.ಎಂ.ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್

by Kundapur Xpress
Spread the love

ಕುಂದಾಪುರ : ಮೂಡಲಕಟ್ಟೆ ಅಲೈಡ್ ಹೆಲ್ತ್ ಸೈನ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್ ಓರಿಯಂಟೇಷನ್. ಐ.ಎಂ.ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ಪ್ರಾರಂಭ ಹಾಗು ಒರಿಎಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ಸ್ವಾತಿ ನಾಯಕ್ ನಗರ್‌ (ಎಂ.ಬಿ.ಬಿ.ಎಸ್, ಎಂ ಡಿ ಮೈಕ್ರೋಬೈಯೋಲಾಜಿ ಹಾಗೂ ನ್ಯೂರೋವೈರೋಲೋಜಿ) ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಂವಹನ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಇದು ಮುಂದಿನ ಜೀವನದ ಯಶಸ್ಸಿಗೆ ನಾoದಿ ಎಂದು ತಿಳಿಸಿದರು.
ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಅವರು ವಿದ್ಯಾರ್ಥಿಗಳು ಹೇಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ತಿಳಿಸಿದರಲ್ಲದೆ ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳ ಬಗ್ಗೆ  ಹಾಗು ಸದುಪಯೋಗಗಳ ಬಗ್ಗೆ ತಿಳಿಸಿದರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮಿನೇಜಸ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಪಕಿ ಉಷಾರಾಣಿ, ಸೌಜನ್ಯ ಹಾಗೂ ಉಪನ್ಯಾಸಕಿ ಸುಷ್ಮಾ ಉಪಾಧ್ಯಾಯ ಹಾಗೂ ಎಲ್ಲಾ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿನಿಯರಾದ ಕುಮಾರಿ ಗಾಯತ್ರಿ ಮತ್ತು ತಂಡ ಪ್ರಾರ್ಥಿಸಿದರು. ಪ್ರೊ. ಜೆನ್ನಿಫರ್ ಫ್ರೀಡಾ ಮಿನೇಜಸ್ ಸ್ವಾಗತಿಸಿದರು, ವಿದ್ಯಾರ್ಥಿನಿ ಬಿಸ್ಮಿ ನಿರೂಪಿಸಿ ವಂದಿಸಿದರು.

 

Related Articles

error: Content is protected !!