Home » ಶಾಸಕ ಗುರುರಾಜ್‌ ಗಂಟಿಹೊಳೆ ಅಭಿನಂದನೆ
 

ಶಾಸಕ ಗುರುರಾಜ್‌ ಗಂಟಿಹೊಳೆ ಅಭಿನಂದನೆ

by Kundapur Xpress
Spread the love

ಬೈಂದೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಶಾಸಕರಾದ ಗುರುರಾಜ್‌ ಗಂಟಿಹೊಳೆ ಅಭಿನಂದನೆ ಸಲ್ಲಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಬಂದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಈ ಸಾಧನೆಗೆ ಕಾರಣವಾದ ವಿದ್ಯಾರ್ಥಿಗಳ ಜತೆಗೆ ಅವರಿಗೆ ಸದಾ ಪ್ರೋತ್ಸಾಹ ನೀಡುವ ಪಾಲಕರು, ಪೋಷಕರು, ಉಪನ್ಯಾಸಕರು ಹಾಗೂ ಶಿಕ್ಷಣ ಇಲಾಖೆಯು ಅಭಿನಂದನಾರ್ಹ
ಈ ಸಾಧನೆ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತು ಮಾಡಿದೆ.
ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಾಗಲಿ ಮತ್ತು ಅನುತ್ತೀರ್ಣರಾದವರು ಎದೆಗುಂದದೆ ಮುಂದಿನ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕ ಭವಿಷ್ಯನ್ನು ಇನ್ನಷ್ಟು ಉಜ್ವಲಗೊಳಿಸಿಕೊಳ್ಳುವಂತೆ ಶಾಸಕರು ಹಾರೈಸಿದ್ದಾರೆ.
ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ  ಶಾಸಕರು ತಿಳಿಸಿದ್ದಾರೆ.

 

Related Articles

error: Content is protected !!