Home » ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಶಾಸಕ ಕೊಡ್ಗಿ
 

ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಶಾಸಕ ಕೊಡ್ಗಿ

ಕುಂದಾಪುರ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚೆ

by Kundapur Xpress
Spread the love

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರನ್ನು ಭೇಟಿಯಾದರು ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿನ ಹೊಳೆ ಮತ್ತು ತೋಡುಗಳಲ್ಲಿ ತುಂಬಿರುವ ಹೂಳುಗಳನ್ನು ಮಳೆಗಾಲದ ಪೂರ್ವದಲ್ಲಿಯೇ ಶೀಘ್ರವಾಗಿ ತೆರವು ಬಗ್ಗೆ ಸೂಕ್ತ ಕ್ರಮ ವಹಿಸುವಂತೆ, ಹಾಗೂ ವಾರಹಿ ಯೋಜನೆಗೆ ಭೂಸ್ವಾದೀನಗೂಂಡ ಜಾಗಗಳಿಗೆ ಪರಿಹಾರ ಒದಗಿಸುವ ಕುರಿತು ಮತ್ತು ಕುಂದಾಪುರ ಪುರಸಭೆಯಲ್ಲಿನ ಬರಗಾಲ ನಿಧಿಯ ಕಾಮಗಾರಿಯ ಮಂಜೂರಾತಿಯ ಬಗ್ಗೆ ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸಿದರು.

 

Related Articles

error: Content is protected !!