ಬೆಂಗಳೂರು : ಇಲಾಖೆಯ ಹಿಂದಿನ ಕಾಮಗಾರಿಗಳ ಅನುದಾನಗಳ ಬಿಡುಗಡೆಯ ಬಗ್ಗೆ ಹಾಗೂ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ಕ್ಷೇತ್ರದ ಮೂಲಭೂತ ಅಭಿವೃದ್ಧಿಯ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಯವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಹಾಗೂ ಈ ಹಿಂದೆ ಮಾಡಿರುವಂತಹ ಕಾಮಗಾರಿಗಳಿಗೆ ಶೀಘ್ರವಾಗಿ ಹಣ ಬಿಡುಗಡೆಗೊಳಿಸುವಂತೆ ವಿನಂತಿಸಿದರು ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ