ಉಡುಪಿ : ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಡಿಗಾರ ಲಿಂಗಯ್ಯ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಉಂಟಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಸಕರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಉಪಾಧ್ಯಕ್ಷರಾದ ದೇವು ಪೂಜಾರಿ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು