ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು.
ಕುಸ್ತಿ ಪಾರಂಪರಿಕ ಹಿನ್ನಲೆ ಇರುವ ಕ್ರೀಡೆ. ರಾಜಪ್ರಭುತ್ವ ಕಾಲಘಟ್ಟದಲ್ಲಿ ಅತ್ಯಂತ ಚಾಲ್ತಿಯಲ್ಲಿತ್ತು. ದೇಸಿ ಸೊಗಡು ಹೊಂದಿರುವ ಈ ಕ್ರೀಡೆ ಇಂದು ಜಾಗತಿಕ ಮನ್ನಣೆ ಪಡೆದು ವಿವಿಧ ಆಯಾಮಗಳಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಸಧೃಡತೆಯ ಜೊತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತೀರ್ಥಹಳ್ಳಿಯ ವಾಗ್ಧೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀ ಜಗದೀಶ್ ಕೆ.ಎಸ್. ಸಮಾರೋಪ ಮಾತುಗಳನ್ನಾಡಿದರು.
ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಕುಸ್ತಿ ಪಂದ್ಯಾಟದಲ್ಲಿ 69 ಅಂಕಗಳೊAದಿಗೆ ಆಳ್ವಾಸ್ ಕಾಲೇಜು, ಮೂಡುಬಿದಿರೆ ಪ್ರಥಮ ಸ್ಥಾನ, 32 ಅಂಕಗಳೊAದಿಗೆ ಶ್ರೀ ಗೋಕರ್ಣಾನಾಥೇಶ್ವರ ಕಾಲೇಜು, ಮಂಗಳೂರು ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಜೊತೆಗೆ ಕ್ರಮವಾಗಿ 16 ಮತ್ತು 14 ಅಂಕಗಳೊAದಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರ್, ಮಂಗಳೂರು ಯುನಿವರ್ಸಿಟಿ ಕ್ಯಾಂಪಸ್ ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ 64 ಅಂಕಗಳೊAದಿಗೆ ಆಳ್ವಾಸ್ ಕಾಲೇಜು, ಮೂಡುಬಿದಿರೆ ಪ್ರಥಮ ಸ್ಥಾನ, 23 ಅಂಕಗಳೊAದಿಗೆ ಎಸ್.ಡಿ.ಎಮ್. ಕಾಲೇಜು, ಉಜಿರೆ ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಜೊತೆಗೆ ಕ್ರಮವಾಗಿ 21 ಮತ್ತು 16 ಅಂಕಗಳೊAದಿಗೆ ಮಂಗಳೂರು ಯುನಿವರ್ಸಿಟಿ ಕ್ಯಾಂಪಸ್, ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜು ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದುಕೊಂಡರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟçಮಟ್ಟದ ಕುಸ್ತಿಪಟು ಹಾಗೂ ಪ್ರಾಕ್ತನ ವಿದ್ಯಾರ್ಥಿ ಶ್ರೀ ರಕ್ಷಿತ್ ಶೆಟ್ಟಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.
ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪೂಜಾ ಕುಂದರ್ ಅತಿಥಿಗಳನ್ನು ಪರಿಚಯಿಸಿ, ಯೋಗೀಶ್ ಶ್ಯಾನುಭೋಗ್ ವಂದಿಸಿ, ಪ್ಲೇಸ್‌ಮೆಂಟ್ ಆಫೀಸರ್ ಶ್ರೀ ಸುರೇಶ್ ಕಾಮತ್ ಬಹುಮಾನಿತರ ಪಟ್ಟಿ ವಾಚಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.