ಕುಂದಾಪುರ: ಎ.1 ರಿಂದ ಜೂ.10 ರವರೆಗೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿರುವ ಒಟ್ಟು 12 ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ಅದರ ಮಾಲಿಕರಿಗೆ ಹಸ್ತಾಂತರಿಸಲಾಯಿತು
ಗುರುವಾರ ಕುಂದಾಪುರ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೊಲೀಸ್ ನಿರೀಕ್ಷಕರಾದ ನಂದಕುಮಾರ್ ರವರು ಮಾಲೀಕರಿಗೆ ಮೊಬೈಲ್ ಹಸ್ತಾಂತರಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, ಮೊಬೈಲ್ ಖರೀದಿ ಮಾಡುವ ಗ್ರಾಹಕರು ಸಿಇಐಆರ್ (ಸೆಂಟ್ರಲ್ ಇಕ್ಯೂಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ) ಪೋರ್ಟಲ್ ನಲ್ಲಿ ನೊಂದಾಯಿಸುವುದರಿಂದ, ಕಳವಾದ ಹಾಗೂ ನಾಪತ್ತೆಯಾದ ಮೊಬೈಲ್ಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಅನುಕೂಲವಾಗುತ್ತದೆ ಹಾಗೂ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್‌ಗಳ ದುರ್ಬಳಕೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದರುಮಾಲಿಕರಿಗೆ ಮರಳಿ ನೀಡಲಾದ ಮೊಬೈಲ್ ಗಳನ್ನು ಹಾವೇರಿ, ಗದಗ, ಮಂಗಳೂರು, ದಾವಣಗೆರೆ, ಕಾರವಾರ ಮುಂತಾದ ಕಡೆಗಳಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ

