Home » ಪ್ರಧಾನ ಮಂತ್ರಿ ಜನ್ಮದಿನದ ಪ್ರಯುಕ್ತ : ಉಚಿತ ರಿಕ್ಷಾ ಪ್ರಮಾಣ
 

ಪ್ರಧಾನ ಮಂತ್ರಿ ಜನ್ಮದಿನದ ಪ್ರಯುಕ್ತ : ಉಚಿತ ರಿಕ್ಷಾ ಪ್ರಮಾಣ

by Kundapur Xpress
Spread the love

ಕಾಪು : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪೇಟೆ ಬಳಿ ಚಾಲನೆ ನೀಡಿದರು.

ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷರಾದ ಚಂದ್ರ ಮಲ್ಲಾರ್ ಇವರು ಸುಮಾರು 10 ವರ್ಷಗಳಿಂದ ಹಾಗೂ ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್ ಇವರು ಕಳೆದ 3 ವರ್ಷಗಳಿಂದ ಉಚಿತ ರಿಕ್ಷಾ ಪ್ರಮಾಣ ಸೇವೆ ನೀಡುತ್ತಾ ಬಂದಿರುತ್ತಾರೆ ಇವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಪುರಸಭೆಯ ಸದಸ್ಯರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

error: Content is protected !!