ನವದೆಹಲಿ : ಲೋಕಸಭಾ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3ರಂದು ಕೇಂದ್ರ ಮಂತ್ರಿ ಪರಿಷತ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪುಟ ದರ್ಜೆ ಹಾಗೂ ಎಲ್ಲ ರಾಜ್ಯ ದರ್ಜೆ ಸಚಿವರು ಭಾಗಿಯಾಗಲಿದ್ದಾರೆ ಕಳೆದ ಬಾರಿ ಮಾ.5ಕ್ಕೆ ಚುನಾವಣಾ ಆಯೋಗ ಲೋಕಸಭೆ ಚುನಾವಣೆಯನ್ನು ಘೋಷಿಸಿತ್ತು. ಹೀಗಾಗಿ ಮೋದಿ ಸಭೆಯ ಬಳಿಕ ಚುನಾವಣೆ ಘೋಷಣೆಯಾಗುವುದೇ ಎಂಬ ಕುತೂಹಲ ಮೂಡಿದೆ
ಚಾಣಕ್ಯಪುರಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಮಂತ್ರಿಮಂಡಲದ ಸಭೆ ನಡೆಯಲಿದೆ. ಪ್ರಮುಖ ನೀತಿ ವಿಷಯಗಳ ಬಗ್ಗೆ ಚರ್ಚಿಸಲು, ವಿವಿಧ ಉಪಕ್ರಮಗಳ ಅನುಷ್ಠಾನದ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪ್ರಧಾನಿ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ