ಶಿವಮೊಗ್ಗ : ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಈಶ್ವರಪ್ಪ ತಮ್ಮ ಪ್ರಚಾರ ಸಭೆಗಳಲ್ಲಿ ಮೋದಿಯವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಅಶೋಕ್ ಮತ್ತಿರರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೋದಿಯವರ ಚಿತ್ರ ಬಳಕೆ ಮಾಡಿಕೊಳ್ಳಲು ಎನ್ ಡಿಎ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಬಿಜೆಪಿಯ ಅಧಿಕೃತ ಅಭ್ಯರ್ಥಿ ನಾನು. ನಮ್ಮ ಎನ್‌ಡಿಎ ನಾಯಕ ಮೋದಿ ಅವರನ್ನು ನಾವು ಉಪಯೋಗಿಸಿಕೊಳ್ಳಬೇಕೇ ವಿನಃ ಬೇರೆಯವರು ಉಪಯೋಗಿಸಿಕೊಳ್ಳಲು ಬರಲ್ಲ ಎಂದು ಬಿ.ವೈ.ರಾಘವೇಂದ್ರ ಹೇಳಿದರು.
ಈಶ್ವರಪ್ಪಗೆ ಅಧಿಕಾರವಿಲ್ಲ
ಆರ್. ಅಶೋಕ್ : ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಮಾತನಾಡಿ, ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಸರ್ಕಾರಿ ಕಾರ್ಯಕ್ರಮಗಳಿದ್ದರೆ ಪ್ರಧಾನಿಗಳ ಫೋಟೋ ಬಳಕೆ ಮಾಡಿಕೊಳ್ಳ ಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ ಬಿಜೆಪಿ ಮಾತ್ರ ನರೇಂದ್ರ ಮೋದಿ ಫೋಟೋ ಬಳಕೆಗೆ ಅಧಿಕಾರ ಇದೆ ಎಂದು ತಿಳಿಸಿದರು.