ಕುಂದಾಪುರ : ವಿಶ್ವ ನಾಯಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು “ಲಕ್ಷ ಕಂಠ ಗೀತೋತ್ಸವ”ದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಲಿದ್ದು
ಬನ್ನಂಜೆಯ ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ತದನಂತರ ಲಕ್ಷ ಕಂಠ ಗೀತೋತ್ಸವ’*ದಲ್ಲಿ ಭಾಗವಹಿಸಿ.
ಸಾಮೂಹಿಕ ಭಗವದ್ಗೀತಾ ಪಠಣ ಮತ್ತು ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಸರ್ವ ಪದಾಧಿಕಾರಿಗಳು ಕಾರ್ಯಕರ್ತರು ಮೋದಿಜಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಪೂರ್ವಭಾವಿಯ ಮೂಲಕ ಕರೆ ನೀಡಿದರು.
ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಸಭೆಯ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.ಜಿಲ್ಲಾ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳಾಡಿದರು
ಕಾರ್ಯಕ್ರಮವನ್ನು ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು.
ಸುಧೀರ್ ಕೆ ಎಸ್ ಸರ್ವರನ್ನು ಸ್ವಾಗತಿಸಿದರು. ಸದ್ರಿ ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ,ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು , ರಾಜ್ಯ ಒಬಿಸಿ ಮೋರ್ಚ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಕುಂದಾಪುರ ಪುರಸಭೆಯ ಮಾಜಿ ಸದಸ್ಯರು, ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು

