Home » ಪ್ರಧಾನಿ ನರೇಂದ್ರ ಮೋದಿ ಭೇಟಿ ಪೂರ್ವಭಾವಿ ಸಭೆ
 

ಪ್ರಧಾನಿ ನರೇಂದ್ರ ಮೋದಿ ಭೇಟಿ ಪೂರ್ವಭಾವಿ ಸಭೆ

by Kundapur Xpress
Spread the love

ಉಡುಪಿ : ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಉಡುಪಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಚಾರ ಲಕ್ಷ ಕಂಠ ಗೀತಾ ಪಾರಾಯಣ ಹಾಗೂ ಮೋದಿಜಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದಿಂದ ಗರಿಷ್ಠ ಸಂಖ್ಯೆಯಲ್ಲಿ ನಾವೆಲ್ಲರೂ ಭಾಗವಹಿಸೋಣ ಎಂದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

error: Content is protected !!