Home » ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ : ಸನ್ಮಾನ
 

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ : ಸನ್ಮಾನ

by Kundapur Xpress
Spread the love

ಕುಂದಾಪುರ : ಬಿಟ್ಕಲ್‌ಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಎಚ್ ಹರಿಪ್ರಸಾದ ಶೆಟ್ಟಿ ಮತ್ತು ಚೈತ್ರಾ ಅಡಪ ಅವರು ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ನಿರ್ದೆಶಕರಾಗಿ ಬಹುಮತದಿಂದ ಚುನಾಯಿತರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಅವರನ್ನು ಗುರುತಿಸಿ ಸಮ್ಮಾನಿಸಲಾಯಿತು.

ಮೊಳಹಳ್ಳಿ ವ್ಯವಸಾಯಸೇವಾ ಸಹಕಾರಿ ಸಂಘ ನಿ. ಬಿಟ್ಕಲ್‌ಕಟ್ಟೆ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ, ಉಪಾಧ್ಯಕ್ಷ ಚಿಟ್ಟೆಬೈಲು ಜಗನ್ನಾಥ ಶೆಟ್ಟಿ ಹಾಗೂ ನಿರ್ದೆಶಕರು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ದ್ಯಾವಲಬೆಟ್ಟು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ವತಿ ಎಂ. ಉಪಸ್ಥಿತರಿದ್ದರು

 

Related Articles

error: Content is protected !!