ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

by Kundapur Xpress
Spread the love

ಮೂಡ್ಲಕಟ್ಟೆ : ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಪ್ರದಾಯಿಕ ತಿರುವಾತಿರಂ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ವಿವಿಧ ಮನರಂಜನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.ಅನುಮೋಲ್, ಆಸಿಫ್ ಹಾಗೂ ಹೀನಾ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು.ಪವಿತ್ರಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.ಆಯಿಷಾ ರಫೀದಾ ನಿರೂಪಿಸಿದರು.

 

Related Articles

error: Content is protected !!