Home » ಕಬಡ್ಡಿ ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳ ‌ಸಾಧನೆ
 

ಕಬಡ್ಡಿ ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳ ‌ಸಾಧನೆ

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ

by Kundapur Xpress
Spread the love

ಮೂಡ್ಲಕಟ್ಟೆ : ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕು. ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ,ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಡುಪಿ ಆಮೇಚೂರು, ಕಬಡ್ಡಿ ಫೆಡರೇಷನಪ್ ಆಫ್ ಇಂಡಿಯಾ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 18 ರಿಂದ 25 ವರ್ಷದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ತಂಡ ತೃತೀಯ ಬಹುಮಾನವನ್ನು ಪಡೆಯುವುದರ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಪಂದ್ಯಾವಳಿಯಲ್ಲಿ ಒಟ್ಟು 16 ಪ್ರಥಮ ದರ್ಜೆ ಕಾಲೇಜುಗಳು ಭಾಗವಹಿಸಿರುತ್ತದೆ.
ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ

 

Related Articles

error: Content is protected !!