Home » ಮರ ಬಿದ್ದು ರೈಲು ಸಂಚಾರದಲ್ಲಿ ಅಡಚಣೆ
 

ಮರ ಬಿದ್ದು ರೈಲು ಸಂಚಾರದಲ್ಲಿ ಅಡಚಣೆ

by Kundapur Xpress
Spread the love

ಕುಂದಾಪುರ : ರೈಲ್ವೇ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರೈಲು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೂಡ್ಲಕಟ್ಟೆಯ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ 

ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ತುಂಡಾಗಿ ರೈಲ್ವೇ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿತ್ತು. ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮತ್ಸ ಗಂಧಾ ಎಕ್ಸ್‌ಪ್ರೆಸ್ ಮತ್ತು ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಸಂಚಾರ ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಎರಡು ಗಂಟೆ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬಳಿಕ ತುಂಡಾದ ವಿದ್ಯುತ್ ತಂತಿಗಳನ್ನು ಸರಿಪಡಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

 

Related Articles

error: Content is protected !!