ಮೂಡ್ಲಕಟ್ಟೆ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಲಲಿತ ಕಲಾ ಸಂಘದ ವತಿಯಿಂದ ಓಣಂ ಆಚರಿಸಲಾಯಿತು. ಪೂರ್ವಾಹ್ನ 9:30 ರಿಂದ ‘ಪೂಕಳಂ’ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಅದರಲ್ಲಿ 9 ತಂಡಗಳು ಭಾಗವಹಿಸಿದ್ದರು.11.00 ಗಂಟೆಗೆ ಸಭಾಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಓಣಂ ಹಬ್ಬದ ಮಹತ್ವ, ಆಚರಣೆಯ ಹಿನ್ನೆಲೆ, ಭಾರತೀಯ ಸಾಂಸ್ಕೃತಿಕ ವಿನಿಮಯದ ಮಹತ್ವ ತಿಳಿಸಿದರು.ಇದೆ ಸಂದರ್ಭದಲ್ಲಿ ಗಣೇಶೋತ್ಸವದ ಪ್ರಯುಕ್ತ ಆಯೋಜಿಸಿದ ‘ಪರಿಸರ ಸ್ನೇಹಿ ಗಣೇಶ ಮೂರ್ತಿ’ ಸ್ಪರ್ಧೆಯಲ್ಲಿ ವಿಜೇತರಾಗಿ’ ಪ್ರಥಮ ಬಹುಮಾನ ಪಡೆದ ಸಿಂಚನ ಮತ್ತು ತಂಡ ದ್ವಿತೀಯ ಬಿಸಿಎ ಹಾಗೂ ದ್ವಿತೀಯ ಬಹುಮಾನ ಪಡೆದ ಅಪೂರ್ವ ಮತ್ತು ತಂಡ ದ್ವಿತೀಯ ಬಿಸಿಎ ಇವರಿಗೆ ಬಹುಮಾನ ವಿತರಿಸಲಾಯಿತು.ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾದ ‘ಮೊಸರು ಕುಡಿಕೆ’ ಸ್ಪರ್ಧೆಯಲ್ಲಿ ವಿಜೇತರಾದ ಅಕ್ಷತಾ ಪ್ರಥಮ ಬಿಸಿಎ ಇವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್, ಲಲಿತ ಕಲಾ ಸಂಘದ ಸಂಯೋಜಕರಾದ ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾದ ಕು. ನಿಧಿ ಹಾಗೂ ಗಣಿತಶಾಸ್ತ್ರ ಉಪನ್ಯಾಸಕಿಯಾದ ಕು. ರಕ್ಷಿತಾ ಅಡಿಗ ,ವಿದ್ಯಾರ್ಥಿ ಸಂಯೋಜಕರಾದ ಕು. ನಿರೋಶಾ ಮತ್ತು ಸಿಂಚನ್ ತೃತೀಯ ಬಿಸಿಎ ಉಪಸ್ಥಿತರಿದ್ದರು.ದ್ವಿತೀಯ ಬಿಸಿಎ ರಶಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಯಿತು.ತೀರ್ಪುಗಾರರಾಗಿ ಎಂಐಟಿಕೆ ಕಂಪ್ಯೂಟರ್ ಸೈನ್ಸ್ ಅಸಿಸ್ಟೆಂಟ್ ಪ್ರೊಫೆಸರ್ ಫರಾನಾ ಹಾಗು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ನಿರ್ವಹಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಪೂಕಳಂ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸುಹಾನಿ ಮತ್ತು ತಂಡ, ದ್ವಿತೀಯ ಬಹುಮಾನ ನಿರೋಶಾ ಮತ್ತು ತಂಡ ಹಾಗೂ ತೃತೀಯ ಬಹುಮಾನ ರಕ್ಷಿತಾ ಮತ್ತು ತಂಡ ಪಡೆದರು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಅಂತಿಮ ವರ್ಷದ ವಿದ್ಯಾರ್ಥಿಗಳು, ದ್ವಿತೀಯ ಬಹುಮಾನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹಾಗೂ ತೃತೀಯ ಬಹುಮಾನವನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳು ಪಡೆದುಕೊಂಡರು. ಅತ್ಯುತ್ತಮವಾಗಿ ಚಂಡೆ ವಾದನ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳಿಗೆ ಎಂಐಟಿ ಉಪನ್ಯಾಸಕಿ ಫರಾನ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.