Home » ಮಹಿಳೆಯರು ತಮ್ಮ ಸಾಧನೆಗಳಿಗಾಗಿ ಗುರುತಿಸಲ್ಪಡುವ ಈ ದಿನ : ಸಂಸದ ಕೋಟ
 

ಮಹಿಳೆಯರು ತಮ್ಮ ಸಾಧನೆಗಳಿಗಾಗಿ ಗುರುತಿಸಲ್ಪಡುವ ಈ ದಿನ : ಸಂಸದ ಕೋಟ

by Kundapur Xpress
Spread the love

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ಇವರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಕುಂದಾಪುರ ಕೋಣಿಯ ಮಾನಸ ಜ್ಯೋತಿ ಟ್ರಸ್ಟ್ ವಿಶೇಷ ಚೇತನ ಶಾಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ವಿಶ್ವ ಮಹಿಳಾ ದಿನಾಚರಣೆಯನ್ನು ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಆಚರಿಸಲಾಗುತಿದ್ದು. ರಾಷ್ಟ್ರೀಯ, ಜನಾಂಗೀಯ, ಭಾಷಾ, ಸಾಂಸ್ಕೃತಿಕ, ಆರ್ಥಿಕ ಅಥವಾ ರಾಜಕೀಯ ವಿಭಾಗಗಳನ್ನು ಪರಿಗಣಿಸದೆ ಮಹಿಳೆಯರು ತಮ್ಮ ಸಾಧನೆಗಳಿಗಾಗಿ ಗುರುತಿಸಲ್ಪಡುವ ದಿನ ಇದು. ಮಹಿಳಾ ದಿನವು ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಮಹಿಳೆಯರಿಗೆ ಹೊಸ ಜಾಗತಿಕ ಆಯಾಮವನ್ನು ಪಡೆದುಕೊಂಡಿದೆ ಎಂದರು. ಇದೇ ಸಂದರ್ಭದಲ್ಲಿ ಕೋಣಿ ಮಾನಸ ಜ್ಯೋತಿ ಟ್ರಸ್ಟ್ ವತಿಯಿಂದ ಸಂಸದರನ್ನು ಅಭಿನಂದಿಸಿದರು.

ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈಯವರು ಪ್ರಾಸ್ತಾವಿಕ ಮಾತನಾಡಿದರು. ಕುಂದಾಪುರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್.ಸರ್ವರನ್ನು ಸ್ವಾಗತಿಸಿದರು.ಸತೀಶ್ ಪೂಜಾರಿ ವಕ್ವಾಡಿಯವರು ಕಾರ್ಯಕ್ರಮವನ್ನು ನಿರೂಪಿಸಿ ವಂದನಾರ್ಪಣೆಗೈದರು.

ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯನ್ , ಮಂಡಲ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ರೂಪಾ ಬಾಬು ಪೈ,, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,ಬಿಜೆಪಿ ಕುಂದಾಪುರ ಎಸ್ಸಿ ಮೋರ್ಚಾದ ಅಧ್ಯಕ್ಷ ಮಂಜುನಾಥ ಹಾಗೂ ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕುಂದಾಪುರ ಮಂಡಲದ ಪದಾಧಿಕಾರಿಗಳು ಹಾಗೂ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

 

Related Articles

error: Content is protected !!