69
ಉಡುಪಿ : ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕ ಬಿ. ಆರ್. ಪಾಟೀಲರೇ ಹೇಳಿದ್ದಾರೆ. ರಾಜಕಾರಣ ಏನೇ ಇರಲಿ ಪಾಟೀಲರು ಕಂಡದ್ದು ಕಂಡ ಹಾಗೆ ಹೇಳುವವರು, ಆದ್ದರಿಂದ ಭ್ರಷ್ಟಾಚಾರ ನಡೆದಿರುವುದು ಕನ್ನಡಿಯಷ್ಟೇ ಸ್ಪಷ್ಟವಾಗಿದೆ.
ತಕ್ಷಣ ಮುಖ್ಯ ಮಂತ್ರಿ ಅವರು ವಸತಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಹ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಉಪಮುಖ್ಯಮಂತ್ರಿ ಅವರು ಹೇಳಿದ್ದಾರೆ. ಆದರೆ ಬಡವರಿಗಾದ ಅನ್ಯಾಯ ಸಹಿಸುವುದಿಲ್ಲ ಎಂದು ಸಿಎಂ ಹೇಳುತ್ತಾರೆ, ನಿಗಮದ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ಮಾಡುತ್ತಾರೆ, ತಮ್ಮ ತಾಕತ್ತು ತೋರಿಸುತ್ತಾರೆ ಎಂದು ಭಾವಿಸಿದ್ದೆ ಎಂದು ಹೇಳಿದರು

