ಕೋಟ : ಕೋಟ ಸರ್ಕಲ್ ಬಳಿ ಪೂರ್ವಾಹ್ನದಿಂದಲೇ ಬಾರಿ ಸಂಖ್ಯೆಯಲ್ಲಿ ದೇಶಾಭಿಮಾನಿಗಳು ಸೇರಿದ್ದರು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳದ ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕ ರಘುಪತಿ ಭಟ್ ನಾರಾಯಣ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ರಾಘವೇಂದ್ರ ಕಾಂಚನ್, ಕೋಟತಟ್ಟು ಗ್ರಾಮಪಂಚಾಯತ್ ಸತೀಶ್ ಕುಂದರ್, ಕೋಟ ಗ್ರಾ.ಪಂ. ಉಪಾಧ್ಯಕ್ಷ ಪಾಂಡು ಪೂಜಾರಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ಅಮೃತೇಶ್ವರಿ ದೇಗುಲ ಅಧ್ಯಕ್ಷ ಆನಂದ್ ಸಿ. ಕುಂದರ್, ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರುಗಳು, ಸಮಾಜಸೇವಕರು, ವಿವಿಧ ಸಮುದಾಯಗಳ ಮುಖಂಡರುಗಳು ಭಾಗಿಯಾಗಿ ನಮನ ಸಲ್ಲಿಸಿದರು.