Home » ಅನಿಲ ಸೋರಿಕೆ : ಎಂಆರ್‌ಪಿಎಲ್‌ನ ಇಬ್ಬರು ಸಿಬ್ಬಂದಿ ಸಾವು
 

ಅನಿಲ ಸೋರಿಕೆ : ಎಂಆರ್‌ಪಿಎಲ್‌ನ ಇಬ್ಬರು ಸಿಬ್ಬಂದಿ ಸಾವು

by Kundapur Xpress
Spread the love

ಮಂಗಳೂರು : ಅನಿಲ ಸೋರಿಕೆಯಿಂದ ಮಂಗಳೂರು ಹೊರವಲಯದ ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮೃತ ಸಿಬ್ಬಂದಿಗಳು ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ.

ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆಂದು ಇಬ್ಬರು ಸಿಬ್ಬಂದಿ ತೆರಳಿದ್ದರು. ಟ್ಯಾಂಕ್ ಮೇಲ್ಛಾವಣಿಗೆ ಹೋದ ಬೆನ್ನಲ್ಲೇ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ತಕ್ಷಣದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇಬ್ಬರ ರಕ್ಷಣೆಗೆ ಮುಂದಾಗಿದ್ದ ಮತ್ತೊಬ್ಬ ಸಿಬ್ಬಂದಿ ವಿನಾಯಕ ಮಯಗೇರಿ ಎಂಬವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ 

 

Related Articles

error: Content is protected !!