ಮುರ್ಡೇಶ್ವರ: ಉತ್ತರ ಕನ್ನಡ ಜಿಲ್ಲೆ ಮುರ್ಡೇಶ್ವರದಲ್ಲಿ ಮುಳಬಾಗಿಲು ತಾಲೂಕಿನ ಕೊತ್ತೂರು ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾದ ದುರಂತಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತು ಮಾಡಲಾಗಿದೆ.
ಈ ದುರಂತದಲ್ಲಿ ವಸತಿ ಶಾಲೆಯಿಂದ ಪ್ರವಾಸಕ್ಕೆ ತೆರಳಿದ್ದ 6 ಶಿಕ್ಷಕರು ಸೇರಿದಂತೆ 54 ವಿದ್ಯಾರ್ಥಿನಿಯರಿದ್ದು, ಅರಬ್ಬಿ ಸಮುದ್ರದಲ್ಲಿ ಈಜುವಾಗ ಅಲೆಗೆ ಸಿಲುಕಿ 7 ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದರು ವಸತಿ ಶಾಲೆಯ ವಿದ್ಯಾರ್ಥಿಗಳು ಅಕಸ್ಮಿಕವಾಗಿ ಮೃತಪಟ್ಟರೆ ನೀಡುವ ಪರಿಹಾರ ಮೊತ್ತವನ್ನು 4 ಲಕ್ಷದಿಂದ 5 ಲಕ್ಷಕ್ಕೆ ಎರಿಕೆ ಮಾಡಿ ಮೃತಪಟ್ಟಿರುವ ಎಲ್ಲಾ ವಿದ್ಯಾರ್ಥಿಗಳ ಕುಟುಂಬಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ಧೇಶಕ ಕಾಂತರಾಜು ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿ ಆದೇಶ ಹೊರಡಿಸಿದ್ದಾರೆ