ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೊಂದಿಗೆ -ಸಂಪರ್ಕವನ್ನಿಟ್ಟುಕೊಂಡ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಬಾಂಬ್ ಬ್ಲಾಸ್ಟ್ಗೆ ಸಂಬಧಿಸಿದಂತೆ ಎನ್ ಐಎ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಅನುಮಾನಿತರನ್ನು ಕರೆದು ವಿಚಾರಣೆ ಮಾಡಲಾಗುತ್ತಿದೆ, ಇನ್ನು ಅವರನ್ನು ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ. ತನಿಖೆ ವೇಳೆ ಇಬ್ಬರು ಆರೋಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ವ್ಯಕ್ತವಾಗಿದೆ. ಹಾಗಾಗಿ ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ