ಬಸ್ರೂರು : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜಿಕಾನು, ಯಡಮೊಗೆಯಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಕಮಲಶಿಲೆ ಧರ್ಮದರ್ಶಿಗಳಾದ ಎನ್. ಸಚ್ಚಿದಾನಂದ ಚಾತ್ರರವರು ರಾಷ್ಟ್ರ ಪ್ರಗತಿಯಾಗಬೇಕಾದರೆ ಯುವ ಜನಾಂಗ ಅದರಲ್ಲಿಯೂ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನರಿತು ಬದುಕು ರೂಪಿಸಿಕೊಳ್ಳುವುದರೊಂದಿಗೆ ಬದುಕನ್ನು ದಾನ ಧರ್ಮಾಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ಥಕ ಬದುಕನ್ನು ಸಾಗಿಸಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಶುಭಾಸಂಸನೆ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಶ್ರೀ ಶ್ರೀ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಗ್ರಾಮೀಣ ಪ್ರದೇಶ ಜನಜೀವನದ ಬದುಕು ಮತ್ತು ಸಾಮಾಜಿಕ ಬದ್ಧತೆ ತಿಳಿಯಲು ಸಹಾಯಕವಾಗುವುದಲ್ಲದೆ ವಿದ್ಯಾರ್ಥಿಗಳಲ್ಲಿರುವ ಮನೋಭಾವನೆಗಳು ಬದಲಾಗುವುದರ ಮೂಲಕ ವ್ಯಕ್ತ್ತಿತ್ವಕ್ಕೆ ಪೂರಕವಾದ ಒಳ್ಳೆಯ ಅಂಶಗಳನ್ನು ಕಲಿತು ನಾಡಿನ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀ ಗುರುಮೂರ್ತಿ ಯಡಿಯಾಳ್, ಶ್ರೀ ಶಿವರಾಮ್ ಹೆಮ್ಮಣ್ಣ್, ಶ್ರೀ ವೀರರಾಜೇಂದ್ರ ಹೆಗ್ಡೆ, ಶ್ರೀ ರಾಮಕೃಷ್ಣ ನಾಯ್ಕ್, ಶ್ರೀ ಮಲ್ಲೇಶ್ ಹೆಚ್, ಉಪಸ್ಥಿತರಿದ್ದರು. ಎನ್.ಎಸ್.ಎಸ್. ಘಟಕ ಸಂಯೋಜಕರಾದ ಶ್ರೀ ರಾಘವೇಂದ್ರ ಶೆಟ್ಟಿ ಎಸ್, ಸ್ವಾಗತಿಸಿದರು. ಶಿಬಿರಾರ್ಥಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.