ಮಂಗಳೂರು ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹಿಂದು ನಿಂದನೆ ವಿವಾದಕ್ಕೆ ಸಂಬಂಧಿಸಿ ಇಬ್ಬರು ಶಾಸಕರು, ಪಾಲಿಕೆ ಸದಸ್ಯರು ಹಾಗೂ ಹಿಂದು ಸಂಘಟನೆ ಮುಖಂಡರ ವಿರುದ್ಧ ಕೇಸು ದಾಖಲಿಸಿರುವುದನ್ನು ಬೇಷರತ್ ಆಗಿ ವಾಪಸ್ ಪಡೆಯಬೇಕು. ಇಲಾಖೆ ಅಧಿಕಾರಿಯ ವರ್ಗಾವಣೆ ರದ್ದು ಪಡಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ನಲ್ಲಿ ಗುರುವಾರ ದ.ಕ. ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.
ನಮ್ಮ ಶಾಸಕರು, ಪಾಲಿಕೆ ಸದಸ್ಯರು ಹಾಗೂ ಹಿಂದು ಮುಖಂಡರ ವಿರುದ್ಧ ಕೇಸು ದಾಖಲಿಸಿರುವುದನ್ನು ವಾಪಸ್ ಪಡೆಯಿರಿ ಎಂದು ನಾವು ಕಾಂಗ್ರೆಸ್ ಎದುರು ಭಿಕ್ಷೆ ಬೇಡುವುದಿಲ್ಲ. ಅದನ್ನು ಸಾರ್ವಜನಿಕವಾಗಿ ಹೋರಾಟ ನಡೆಸುವ ಮೂಲಕ ಎದುರಿಸುತ್ತೇವೆ ಎಂದರು