Home » 171ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಕಾರ್ಯಕ್ರಮ
 

171ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಕಾರ್ಯಕ್ರಮ

ಶಾಸಕ ಎ.ಕಿರಣ್ ಕೊಡ್ಗಿ ಭಾಗಿ

by Kundapur Xpress
Spread the love

ಕುಂದಾಪುರ: ತಾಲೂಕು ಆಡಳಿತ ಕುಂದಾಪುರ ವತಿಯಿಂದ ಆಯೋಜಿಸಲಾದ 171ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿದ ಅವರು ಇಡೀ ಜೀವನವನ್ನು ಮುಡಿಪಾಗಿಟ್ಟವರು ಶ್ರೀ ನಾರಾಯಣ ಗುರುಗಳು ಕೇರಳ ಸಮಾಜದಲ್ಲಿನ ಅಸ್ಪೃಶ್ಯತೆ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡವರು ಶ್ರೀ ನಾರಾಯಣ ಗುರುಗಳು. ಜಗತ್ತಿನಲ್ಲಿರುವುದು ಒಂದೇ ಜಾತಿ ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ವವನ್ನು ಪ್ರತಿಪಾದಿಸಿದರು ಕೇರಳದಲ್ಲಿ ಅತಿ ಹೆಚ್ಚು ಸಾಮಾಜಿಕ ಬದಲಾವಣೆಗಳನ್ನು ಮಾಡಿರುವ ವ್ಯಕ್ತಿ ಎಂದರೆ ಅದು ಬ್ರಹ್ಮಶ್ರೀ ನಾರಾಯಣ ಗುರುಗಳು ಅವರ ಸಂದೇಶಗಳನ್ನು ಮೈಗೂಡಿಸಿಕೊಂಡು ನಮ್ಮಲ್ಲಿ ಅಳವಡಿಸಿಕೊಳ್ಳೋಣ ಸಾಧ್ಯವಾದದ್ದು ಅವರು ಹೇಳಿಕೊಟ್ಟ ಶಾಂತಿ ಪಥದಲ್ಲಿ ನಡೆಯೋಣ ಆ ದಾರಿಯಲ್ಲಿಯೇ ನಡೆದು ಕೃತರ್ಥರಾಗಲು ಪ್ರಯತ್ನಿಸೋಣ ಎಂದು ಶ್ರೀ ನಾರಾಯಣ ಗುರುಗಳು ಕೇವಲ ಒಂದು ಜನಾಂಗದ ಗುರುವಲ್ಲ ಮಾನವ ಜನಾಂಗದ ಗುರು ವಿಶ್ವ ಮಾನವ ಗುರು ಎಂದು ಶಾಸಕರು ಕಾರ್ಯಕ್ರಮವನ್ನ ಉದ್ಘಾಟಿಸಿ ದೀಪವನ್ನು ಪ್ರಜ್ವಲಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸದ್ರಿ ಈ ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ.ಆರ್.ಕುಂದಾಪುರ ತಹಶೀಲ್ದಾರರಾದ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹುಕ್ಕೇರಿ ಕುಂದಾಪುರ ಪುರಸಭೆಯ ಅಧ್ಯಕ್ಷ ಮೋಹನ್ ದಾಸ್ ಶೆಣೈ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೆಮ್ಮಾಡಿ ಜನತಾ ಪೂರ್ವ ಕಾಲೇಜ್ ನ ಕನ್ನಡ ಉಪನ್ಯಾಸಕ ನಾಗರಾಜ್ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ ಕುಂದಾಪುರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಹಾಗೂ ಇಲಾಖೆಯ ಅಧಿಕಾರಿಗಳು ಬಿಲ್ಲವ ಸಮಾಜ ಬಾಂಧವರು ಸಾರ್ವಜನಿಕರು ಉಪಸ್ಥಿತರಿದ್ದರು.

 

Related Articles

error: Content is protected !!