ಉಡುಪಿ : ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾ ಪೂಜೆ ಮತ್ತು ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.
ಶ್ರೀ ಗುರು ಜಯಂತಿ ಆಚರಣೆ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷ ಶಿವದಾಸ್ ಪಿ., ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತಾ ಯೋಗೀಶ್ ಶೆಟ್ಟಿ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಉಡುಪಿ ಕ್ರಿಶ್ಚಿಯನ್ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕರಾದ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ,
ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಭಾಸ್ಕರ ಅಂಚನ್, ಸತೀಶ್ ಪೂಜಾರಿ, ವಿನಯ್ ಕುಮಾರ್, ಭಾಸ್ಕರ ಕೋಟ್ಯಾನ್, ನಿತಿನ್ ಕುಮಾರ್, ಚೆನ್ನಕೇಶವ, ಜನಾರ್ದನ ಪೂಜಾರಿ, ಮಹಿಳಾ ಘಟಕದ ಸಹ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್ ಪೂಜಾರಿ, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಅಶ್ವಿನಿ, ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ, ಪ್ರಮುಖರಾದ ರಮೇಶ್ ಕೋಟ್ಯಾನ್, ಕುಶಲ್ ಕುಮಾರ್, ಶಶಿಕಾಂತ್ ಹಾಗೂ ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು