ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ “ನಾರಾಯಣ ಗುರು ಜಯಂತಿ ಹಾಗೂ ರಾಣಿ ಅಬ್ಬಕ್ಕ ಉತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ರಾಜೇಂದ್ರ ಪಂದುಬೆಟ್ಟು, ಶರತ್ ಶರ್ಮಾ, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ವಕೀಲರಾದ ಸಹನಾ ಕುಂದರ್, ಹಾಗೂ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

