Home » ಶುಭದಾ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
 

ಶುಭದಾ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

by Kundapur Xpress
Spread the love

ಕಿರಿಮಂಜೇಶ್ವರ : ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಕುಮಾರಿ ದೀಪಿಕಾ ಆಚಾರ್ಯರವರು ಮಾತನಾಡಿ ಭಾರತದಂತಹ ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಬುದ್ಧ ಮತದಾರರು ದೇಶದ ಆಸ್ತಿ, ದೇಶವು ಅಭಿವೃದ್ಧಿ ಪಥದತ್ತ ಸಾಗುವಲ್ಲಿ ಪ್ರಜ್ಞಾವಂತ ಮತದಾರರ ಪಾತ್ರ ಬಹಳ ಹಿರಿದಾಗಿದೆ ಮತದಾರರು ಹಾಗೂ ಚುನಾವಣೆಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದರು. ಶಿಕ್ಷಕಿ ಕುಮಾರಿ ರಮ್ಯಾ ಅವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವದ ಕುರಿತಾಗಿ ವಿವರಿಸಿದರು.

ಶಿಕ್ಷಕಿ ಪೂರ್ಣಿಮಾ ಅವರು ಸ್ವಾಗತಿಸಿದರೆ, ಕುಮಾರಿ ದೀಪಿಕಾ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀಮತಿ ಆಶಾಲತಾ ವಂದನಾರ್ಪಣೆಯನ್ನು ಗೈದರು. ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಮಣ್ಯ ಮರಾಠಿಯವರು ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು.

 

Related Articles

error: Content is protected !!