ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕನ ಎನ್ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ ಮೂಲಕ ಹತ್ಯೆ ಮಾಡಿದೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ
ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ. ಅಲ್ಲದೆ ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದ್ದು ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ