ಕುಂದಾಪುರ : ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಕ್ಷ್ಮೀ ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ಇಂದು ರವಿವಾರ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯವಾಹಿನಿಗೆ ಬರಲಿದ್ದಾಳೆ.
ಲಕ್ಷ್ಮೀ ಮೇಲೆ ಶಂಕರನಾರಾಯಣ/ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ ಮೇಲೆ ಪ್ರಕರಣ ಇಲ್ಲ ಎಂದು ತಿಳಿದು ಬಂದಿದೆ.
ಲಕ್ಷ್ಮೀ ಪ್ರಸ್ತುತ ಆಂಧ್ರ ಪ್ರದೇಶದಲ್ಲಿ ಗಂಡನ ಜತೆ ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾಳೆ ಗಂಡ ಕೂಡ ನಕ್ಸಲ್ ಆಗಿದ್ದು, ಮುಖ್ಯವಾಹಿನಿಗೆ ಬಂದಿದ್ದರು ಎಂಬ ಮಾಹಿತಿಯೂ ಇದೆ.