ಕಾರ್ಕಳ : ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ವೇಳೆ ಪರಾರಿಯಾದ ಇತರೆ ನಕ್ಸಲರಿ ಗಾಗಿ ಕರಾವಳಿಯ ಪಶ್ಚಿಮಘಟ್ಟದ ದಟ್ಟ ಕಾಡಿನಲ್ಲಿ ಶೋಧಕಾರ್ಯ ತೀವ್ರಗೊಂಡಿದೆ. ಪರಾರಿಯಾಗಿರುವ ನಕ್ಸಲರ ಬಗ್ಗೆ ಪೀತಬೈಲ್ ಸೇರಿದಂತೆ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ಎಎನ್ಎಫ್ ಅಧಿಕಾರಿಗಳು ಕಬ್ಬಿನಾಲೆ, ಪೀತಬೈಲ್, ನಾತ್ಪಾಲು, ಕೂಡ್ಲು ಅರಣ್ಯವ್ಯಾಪ್ತಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಡಿಗೆ ಹೋಗದಂತೆ ಸ್ಥಳೀಯರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ವಿವಿಧ ಜಿಲ್ಲೆಯ ಗಡಿಯಲ್ಲಿ ನಕ್ಸಲ್ ಬಾದಿತ ಕೂಡು ಮೇಗದ್ದೆ ಕಬ್ಬಿನಾಲೆ ಪ್ರದೇಶದಲ್ಲಿ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದೆದೆ. ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಅಲ್ಲಲ್ಲಿ ತಂಡ ಮಾಡಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಎಸ್.ಪಿ. ಜಿತೇಂದ್ರ ಮಾಹಿತಿ ನೀಡಿದ್ದಾರೆ.