ಹುಬ್ಬಳ್ಳಿ : ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಬುಧವಾರ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ವಿಚಾರಣೆಗಾಗಿ 15 ದಿನ ಸಿಐಡಿ ಕಸ್ಟಡಿಗೆ ಪಡೆಯಲು ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ. ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇದ್ದ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಇಲ್ಲಿಯ ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಕರೆತಂದು ಮಹಜರು ಪ್ರಕ್ರಿಯೆ ನಡೆಸಿದರು.