ಕುಂದಾಪುರ : ಕಾಳಾವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆಯನ್ನು ಸಂಸತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು ಅವರು ಮಾತನಾಡಿ ತಾವು ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದ ಅನುಭವನ್ನು ಹಂಚಿ ಕೊಂಡರು. ಕಾಳವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿಗಾರ್ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಜೊತೆಗೂಡಿ ಉದ್ಘಾಟಿಸಿದರು. ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಸರ್ಕಾರದ ನೆರವಿನ ಭರವಸೆಯ ಬಗ್ಗೆ ತಿಳಿಸಿದರು.
ಸದ್ರಿ ಈ ಕಾರ್ಯಕ್ರಮದಲ್ಲಿ ಕಾಳವರ ಗ್ರಾಮ ಪಂಚಾಯತ್ ನ ಸದಸ್ಯರು ,ಗಣ್ಯರು ,ಶಿಕ್ಷಕರು ಅಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿದ್ದರು. ಪಂಚಾಯತ್ ಸದಸ್ಯರಾದ ರಾಮಚಂದ್ರ ನಾವಡ ಸ್ವಾಗತಿಸಿದರು ಸದಸ್ಯ ರಮೇಶ ಶೆಟ್ಟಿ ವಕ್ವಾಡಿ ವಂದನಾರ್ಪಣೆ ಮಾಡಿದರು.