Home » 108 ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಉದ್ಘಾಟನೆ
 

108 ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಉದ್ಘಾಟನೆ

by Kundapur Xpress
Spread the love

ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಲೋಕಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ಧಿಗಾಗಿ ನವದಿನಗಳ ಪರ್ಯಂತ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನೊಳಗೊಂಡ 108 ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಹಾಗೂ ಆಹ್ವಾನಿತ ತಂಡಗಳ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ಕಾರ್ಯಕ್ರಮವನ್ನು ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ಮನೋಹರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಕಲ್ಯಾ, ಗೌರವಾಧ್ಯಕ್ಷರಾದ ಲಾಲಾಜಿ‌ ಆರ್‌‌. ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿ ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಕಾರ್ಯಧ್ಯಕ್ಷರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ. ವಿಶ್ವನಾಥ, ಅಶೋಕ್ ಶೆಟ್ಟಿ, ಶ್ರೀಕಾರ್ ಶೆಟ್ಟಿ ಕಲ್ಯಾ, ಮಾಧವ ಪಾಲನ್, ಶ್ರೀಧರ್, ನಡಿಕೆರೆ ರತ್ನಾಕರ ಶೆಟ್ಟಿ, ಗೀತಾಂಜಲಿ ಸುವರ್ಣ ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

   

Related Articles

error: Content is protected !!