ಬೆಂಗಳೂರು : ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ ಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ಈ ವಿಚಾರದಲ್ಲಿ ಯಾರಿಂದ ಲೋಪವಾಗಿದೆ ಎಂದು ನ್ಯಾಯಾಲಯವೇ ತೀರ್ಮಾನಿಸಲಿ ಎಂದು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅನುದಾನ ಬಂದಿಲ್ಲ ಎಂದು ಕರ್ನಾಟಕ ಸರ್ಕಾರ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯಕ್ಕೆ ಸತ್ಯಾಸತ್ಯತೆಯ ಅಂಕಿ- ಅಂಶಗಳನ್ನು ನೀಡುವುದು ವಿತ್ತ ಸಚಿವೆಯಾಗಿ ನನ್ನ ಕರ್ತವ್ಯ. ಅದನ್ನು ನಾನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.