Home » ಮಕ್ಕಳ ಕನಸಿನ ಬುತ್ತಿ ತೆರೆಯುವ ಪ್ರಯತ್ನವಾಗಬೇಕು 
 

ಮಕ್ಕಳ ಕನಸಿನ ಬುತ್ತಿ ತೆರೆಯುವ ಪ್ರಯತ್ನವಾಗಬೇಕು 

ಪ್ರದೀಪ್ ಪೂಜಾರಿ

by Kundapur Xpress
Spread the love

ಕೋಟ : ಮಕ್ಕಳ ಆಲೋಚನೆಗಳು, ಭಾವನೆಗಳು ವಿಭಿನ್ನವಾಗಿರುತ್ತದೆ, ಅವರಲ್ಲಿಯೂ ನೂರಾರು ಕನಸುಗಳು ಗುರಿಗಳು ಮನದಲ್ಲಿ ಅಡಕವಾಗಿರುತ್ತದೆ. ಅದನ್ನು ಸಾಧಿಸಿ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ಭಾವನೆಗಳು ತೆರೆದು ಸಮಾಜದ ಮುಂದೆ ಅನಾವರಣವಾಗಲು ಬೇಸಿಗೆ ಶಿಬಿರಗಳು ಸಹಾಯವಾಗುತ್ತಿರುವುದು ಶ್ಲಾಘನೀಯ ಎಂದು ಕೋಟ ನಿಸ್ವಾರ್ಥ ಸೇವಾ ಟ್ರಸ್ಟ್ ಕಾರ್ಯದರ್ಶಿ ಪ್ರದೀಪ್ ಪೂಜಾರಿ ಅವರು ಹೇಳಿದರು.
ಅವರು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಉಸಿರು ಕೋಟ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಕರಾವಳಿ ಕಣ್ಮಣಿ ಮತ್ಸೋದ್ಯಮಿ ದಿ. ಕೆ.ಸಿ ಕುಂದರ್ ಸ್ಮರಣಾರ್ಥವಾಗಿ ನಡೆಯುವ 24 ನೇ ವರ್ಷದ ಬೇಸಿಗೆ ಶಿಬಿರ ವಿಕಸನ-2024 ಐದನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ, ಸತೀಶ್ ವಡ್ಡರ್ಸೆ, ಶಿಬಿರದ ತಂಡಗಳ ನಾಯಕರು ಉಪಸ್ಥಿತರಿದ್ದರು.

   

Related Articles

error: Content is protected !!