ಉಡುಪಿ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಎ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಅವರು ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಅದು ಮುಗಿದ ಬಳಿಕ ಕೋಟ ಅವರು ಮೆರವಣಿಗೆಯಲ್ಲಿ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು
ಲೋಕಸಭಾ ಚುನಾವಣೆಗೆ ಪೂರಕವಾಗಿ ಬಿಜೆಪಿ ಉಡುಪಿ ಜಿಲ್ಲಾ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ