ಬೆಂಗಳೂರು : ಮೊದಲ ಹಂತದಲ್ಲಿ ಏ.26ರಂದು ನಡೆಯುವ 14 ಕ್ಷೇತ್ರಗಳ ಲೋಕಸಭಾ ಚುನಾವಣೆಗೆ ಭರ್ಜರಿ ರೋಡ್ ಶೋ ಮತ್ತು ಘೋಷಣೆಗಳೊಂದಿಗೆ ಬಿಜೆಪಿ, ದಳ ಮೈತ್ರಿ ಕೂಟ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಯಿತು. ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್, ಬೆಂಗಳೂರು ಕೇಂದ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಿ.ಸಿ. ಮೋಹನ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯಾರೆಡ್ಡಿ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್, ತುಮಕೂರಿನಲ್ಲಿ ವಿ.ಸೋಮಣ್ಣ, ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ, ಹಾಸನದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್, ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಸೇರಿದಂತೆ ಸೋಮವಾರ 49 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು.