161
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಷ್ಟ್ರೀಯ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ಅವರು ಏ. 20 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ನಂತರ ಕಲ್ಸಂಕ, ಬ್ರಹ್ಮಗಿರಿ ಮೂಲಕ ತಾಲೂಕು ಕಛೇರಿಗೆ ತೆರಳಿ 12 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು. ಪಾದಯಾತ್ರೆಯಲ್ಲಿ ಸುಮಾರು 10-15 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಕ್ಷದ ಜಿಲ್ಲಾ ನಾಯಕರ ಜೊತೆ ರಾಜ್ಯ ನಾಯಕರೂ ಉಪಸ್ಥಿತರಿರುತ್ತಾರೆ ಎಂದರು.

