ಮಡಿಕೇರಿ: ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ವಿ.3 ರಂದು ನಾಮಪತ್ರ ಸಲ್ಲಿಸಲಿದ್ದು ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ಇಂದು ಸಮಾವೇಶ
ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಮಾ.27 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೊಡಗು ಉಸ್ತುವಾರಿ ಅಶ್ವತ್ ನಾರಾಯಣ ಗೌಡ, ಅಭ್ಯರ್ಥಿ ಯದುವೀರ್, ಮಾಜಿ ಶಾಸಕ ರಾಮದಾಸ್, ಸಂಚಾಲಕ ರವಿ ಶಂಕರ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ರವಿ ಕಾಳಪ್ಪ ಮಾಹಿತಿ ನೀಡಿದರು.