ಕಾಪು : ಭಾರತವನ್ನು ವಿಶ್ವ ಗುರುವನ್ನಾಗಿಸಲು ಶ್ರಮಿಸುತ್ತಿರುವ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ವತಿಯಿಂದ ಕಟಪಾಡಿ ಅಚ್ಚಡ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ ನೆರವೇರಿತು.ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಸಿಹಿ ಹಂಚಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್ ಪಡುಕೆರೆ, ಸುರೇಖಾ ಅಮೀನ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಸುಭಾಸ್ ಬಲ್ಲಾಳ್, ಶಾಲಾ ಮುಖ್ಯೋಪಾಧ್ಯಾಯರಾದ ಗಿರಿಜಾ ಉಪಸ್ಥಿತರಿದ್ದರು.