ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗಿದ್ದು 24 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು
ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಿಗ್ಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಭೋಧಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸ್ಪೀಕರ್ ಯು ಟಿ ಖಾದರ್ ನೂತನ ಸಚಿವರನ್ನು ಅಭಿನಂದಿಸಿದರು